Latest

ಮೂವರು ಡಿಸಿಎಂ ಆಯ್ಕೆ ; ನೂತನ ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಜೊತೆ ಮಾತನಾಡಿದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಶಾಸಕರಿಗೆ, ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಹಾಗೂ ಹಿರಿಯ ನಾಯಕರಿಗೆ ಧನ್ಯವಾದ ಎಂದು ನಿಯೋಜಿತ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Home add -Advt

ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನನ್ನ ಹೆಸರನ್ನು ಸೂಚಿಸಿ ಬಿ.ಎಸ್.ಯಡಿಯೂರಪ್ಪ ನನಗೆ ಆಶಿರ್ವಾದ ಮಾಡಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರೀಕ್ಷಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಬಡ ಜನರ ಸಂಕಷ್ಟವನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಜನಪರ ಆಡಳಿತವನ್ನು ನೀಡುವ, ಕರ್ನಾಟಕ ರಾಜ್ಯವನ್ನು ಉನ್ನತಿಗೆ ಶ್ರಮಿಸುತ್ತೇನೆ ಎಂದರು.

ಗೋವಿಂದ ಕಾರಜೋಳ, ಆರ್.ಅಶೋಕ ಮತ್ತು ಶ್ರೀರಾಮುಲು ಅವರನ್ನು ನೂತನ ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ.

ಬಸವರಾಜ ಬೊಮ್ಮಾಯಿ ಅವರ ಬಯೋಡಾಟಾ ಇಲ್ಲಿದೆ –  Bommai_Resume
ನಾಳೆ ಮಧ್ಯಾಹ್ನ ನೂತನ ಸಿಎಂ ಆಗಿ ಬೊಮ್ಮಾಯಿ ಪ್ರಮಾಣವಚನ

Related Articles

Back to top button