LatestUncategorized

*ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆ ಸಾಧ್ಯತೆ; ಅಭಿಮಾನಿಗಳಲ್ಲಿ ಸಂಭ್ರಮ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಮಾತುಕತೆ ಬೆನ್ನಲ್ಲೇ ಸಿದ್ದರಾಮಯ್ಯ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಫೈನಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಅಂತಿಮಗೊಳ್ಳುತ್ತಿದ್ದಂತೆ ರಾಜ್ಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳ ಸಂಭ್ರಮಾಚರಣೆ ಆರಂಭವಾಗಿದೆ. ಇನ್ನು ಸಿದ್ದರಾಮಯ್ಯನವರ ಹುಟ್ಟೂರು ಸಿದ್ದರಾಮಯ್ಯನಹುಂಡಿಯಲ್ಲಿಯೂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದ್ದಾರೆ.

Home add -Advt
https://pragati.taskdun.com/d-k-shivakumarsiddaramaiahrahul-gandhimeet/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button