Karnataka NewsPolitics
*ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಯ ಗೀತೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಆರಂಭವಾಗಿದೆ. ಇಂದಿನಿಂದ ಆಗಸ್ಟ್ 10ರವರೆಗೆ ಪಾದಯಾತ್ರೆ ನಡೆಯಲಿದ್ದು, ಪಾದಯಾತ್ರೆ ಗೀತೆಯನ್ನು ಬಿಡುಗಡೆಗೊಳಿಸಲಾಯಿತು.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ದ ಜೆಡಿಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಗೀತೆಯನ್ನು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೇಗೌಡ ಹಾಗೂ ಬಿಜೆಪಿ ಜೆಡಿಎಸ್ ನಾಯಕರು ಹಾಜರಿದ್ದರು.




