Kannada Rajyotsava – Home Add
Valmiki Jayanti Add

9 ಬಾರಿ ನೆಗೆಟಿವ್, 10ನೇ ಬಾರಿ ಪಾಸಿಟಿವ್

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. 

 

ಪ್ರಗತಿವಾಹಿನಿ ಸುದ್ದಿ, ಹೊನ್ನಾಳಿ – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಅವರು ಈ ಹಿಂದೆ 9 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಎಲ್ಲ ಸಂದರ್ಭದಲ್ಲಿ ನೆಗೆಟಿವ್ ಬಂದಿತ್ತು. ಆದರೆ ಇಂದು 10ನೇ ಬಾರಿಗೆ ಟೆಸ್ಟ್ ಮಾಡಿಸಿಕೊಂಡಾಗ ಪಾಸಿಟಿವ್ ಬಂದಿದೆ.

ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡ ಬಳಿಕ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ರೇಣುಕಾಚಾರ್ಯ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.