Corona – Balachandra Jarkiholi
Mahantesh Vakkunda -Babri

ತಂದೆ-ತಾಯಿಯನ್ನೇ ಹತ್ಯೆಗೈದನಾ ಟೆಕ್ಕಿ?

ಕೌಟುಂಬಿಕ ಕಲಹ, ಕುಡಿದ ಅಮಲಿನಲ್ಲಿ ಕೃತ್ಯವೆಸಗಿದ ಶಂಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಂಪತಿಗಳ ಬರ್ಬರ ಹತ್ಯೆ ನಡೆದಿದ್ದು, ಸ್ವಂತ ಮಗನೇ ತಂದೆ-ತಾಯಿಗಳಿಬ್ಬರನ್ನೂ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರನ್ನು ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ.

ಗೋವಿಂದಪ್ಪ ಅವರು ಆರ್ ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆ-ತಾಯಿಯನ್ನು ಕೊಲೆ ಮಾಡಿದ್ದು, ಕುಡಿದ ಮತ್ತಿನಲ್ಲಿ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಕೋಣನಕುಂಟೆ ಪೊಲೀಸರು ನವೀನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.