Kannada NewsLatest

ಕ್ಷೇತ್ರಬಿಟ್ಟು ಹೋಗಬೇಡಿ, ಅತಿ ತುರ್ತು ಕೆಲಸಗಳಿಗೆ ನೀವೇ ತೀರ್ಮಾನ ಕೈಗೊಳ್ಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು‌ ವಹಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಇಂದು ಸೂಚನೆ ನೀಡಿದ್ದಾರೆ.
ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈಗಾಗಲೇ 50 ಕೋಟಿ ಹಣ ಬಿಡುಗಡೆ ಮಾಡಿದ್ದು ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿಗಳು, ಅತಿ ತುರ್ತು ಕೆಲಸಗಳಿಗೆ ನೀವೇ ತೀರ್ಮಾನ ತೆಗೆದುಕೊಂಡು ಮುಂದುವರೆಯಬೇಕು ಎಂದು ಸೂಚನೆ ನೀಡಿದ್ದಾರೆ.

Related Articles

Back to top button