ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ
ಸಚಿವರು ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ -ಲಕ್ಷ್ಮಿ ಹೆಬ್ಬಾಳಕರ್
ಸಚಿವರು ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ -ಲಕ್ಷ್ಮಿ ಹೆಬ್ಬಾಳಕರ್
ರಮೇಶ ಜಾರಕಿಹೊಳಿ ತಾವು ಕ್ಯಾಬಿನೆಟ್ ಸಚಿವರಾದ ತಕ್ಷಣ ಏನು ಬೇಕಾದರೂ ಮಾತನಾಡಬಹುದು ಎಂದು ತಿಳಿದಂತಿದೆ. ಗೋಕಾಕದ ಜನರು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎನ್ನುವ ಕಾರಣಕ್ಕೆ ಇವರಿಗೆ ಮತ ನೀಡಿದ್ದಾರೆಯೇ ವಿನಃ ಇವರ ಮುಖ ನೋಡಿ ಮತ ಹಾಕಿಲ್ಲ. ಇನ್ನಾದರೂ ತಮ್ಮ ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ ಎಂದು ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ನಾನು ಕಿತ್ತೂರು ರಾಣಿ ವಂಶಸ್ಥೆ. ನನ್ನದು ಹೋರಾಟದ ರಾಜಕಾರಣ. ಠೊಳ್ಳು ಬೆದರಿಕೆಗಳಿಗೆಲ್ಲ ನಾನು ಹೆದರುವವಳಲ್ಲ. ನನ್ನ ಬೆಳಗಾವಿ ತಾಲೂಕಿನ ಸ್ವಾಭಿಮಾನಿ ಜನರಿಗೋಸ್ಕರ ನನ್ನ ಹೋರಾಟ ಮುಂದುವರಿಸುತ್ತೇನೆ. ಸಮಯ ಮತ್ತು ನನ್ನ ಆತ್ಮಸ್ಥೈರ್ಯ ಇವರಿಗೆ ತಕ್ಕ ಉತ್ತರ ನೀಡುತ್ತದೆ. ಸ್ವಾಭಿಮಾನಿ ಬೆಳಗಾವಿ ತಾಲೂಕನ್ನು ಇವರ ಕಪಿ ಮುಷ್ಠಿಯಲ್ಲಿ ಸಿಲುಕಲು ನಾನು ಅವಕಾಶ ಕೊಡುವುದಿಲ್ಲ
-ಲಕ್ಷ್ಮಿ ಹೆಬ್ಬಾಳಕರ್