Advertisement -Home Add

ಶೀಘ್ರ ಗುಣಮುಖರಾಗಲಿ – ಲಕ್ಷ್ಮಿ ಹೆಬ್ಬಾಳಕರ್ ಪ್ರಾರ್ಥನೆ

ಆರೋಗ್ಯ ಆದಷ್ಟು ಬೇಗ ಸುಧಾರಿಸಿ ಇವರೆಲ್ಲ ಜನಸೇವೆಗೆ ಮರಳುವಂತಾಗಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಸೋಂಕು ತಗುಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಎಲ್ಲ ನಾಯಕರ ಆರೋಗ್ಯ ಆದಷ್ಟು ಬೇಗ ಸುಧಾರಿಸಿ ಇವರೆಲ್ಲ ಜನಸೇವೆಗೆ ಮರಳುವಂತಾಗಲಿ ಎಂದು ಪ್ರಾರ್ಥಿಸುತ್ತಾನೆ ಎಂದಿದ್ದಾರೆ.
ಸಾರ್ವಜನಿಕ ಜೀವನದಲ್ಲಿರುವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ತುಂಬಾ ಕಷ್ಟದ ಕೆಲಸ. ಆದರೂ ಆರೋಗ್ಯ ಮುಖ್ಯವಾಗಿರುವುದರಿಂದ ಎಲ್ಲರೂ ಹೆಚ್ಚಿನ ಮುತುವರ್ಜಿ ವಹಿಸಬೇಕು. ಸಾರ್ವಜನಿಕರೂಎಚ್ಚರವಹಿಸಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಹೆಬ್ಬಾಳಕರ್ ವಿನಂತಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಶ್ರೀರಾಮುಲು, ಡಾ.ಕೆ.ಸುಧಾಕರ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ ಗುಂಡೂರಾವ್ ಕೂಡ ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.