Advertisement -Home Add

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪುತ್ರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಯುವ ನಾಯಕ ಮೃಣಾಲ ಹೆಬ್ಬಾಳಕರ್ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಅವರ ಪುತ್ರರಾಗಿರುವ ಮೃಣಾಲ ಹೆಬ್ಬಾಳಕರ್, ವಿದ್ಯಾರ್ಥಿ ಕಾಂಗ್ರೆಸ್ ನಲ್ಲಿ ಮತ್ತು ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಪಕ್ಷದ ಕೆಲಸಗಳನ್ನು ಮಾಡುತ್ತಿರುವ ಅವರು, ಅನೇಕ ಜನಪರ ಹೋರಾಟಗಳನ್ನು ಸಂಘಟಿಸಿದ್ದಾರೆ.