Crease wise (28th Jan)
KLE1099 Add

ಶಿರಸಿ ಜಿಲ್ಲಾ ಬಂದ್ ಗೆ 50ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

  ಮೆರವಣಿಗೆಯಲ್ಲಿ 500ಕ್ಕೂ ಅಧಿಕ ಜನರು ಭಾಗಿ.

Anand Ads 3 (3)

   ಮೆರವಣಿಗೆಯಲ್ಲಿ 500ಕ್ಕೂ ಅಧಿಕ ಜನರು ಭಾಗಿ

ಪ್ರಗತಿವಾಹಿನಿ ಸುದ್ದಿ, ಶಿರಸಿ – ಉತ್ತರ ಕನ್ನಡ ಜಿಲ್ಲೆ ವಿಭಾಗಿಸಿ ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಒತ್ತಾಯಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿರುವ ಬಂದ್ ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಶಿರಸಿ ಜಿಲ್ಲೆಯಾಗಬೇಕೆಂಬ 30 ವರ್ಷದ ಬಲವಾದ  ಕೂಗಿಗೆ ಬುಧವಾರ 50 ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಬೆಂಬಲ ವ್ಯಕ್ತಪಡಿಸಿ ಮೆರವಣಿಗೆಯುದ್ದಕ್ಕೂ ಹೆಜ್ಜೆಹಾಕಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಹಳೇ ಬಸ್ ನಿಲ್ದಾಣ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯುದ್ದಕ್ಕೂ ಶಿರಸಿ ಜಿಲ್ಲೆಯಾಗಬೇಕು ಎನ್ನುವ ಘೋಷಣೆಗಳು ಮೊಳಗಿದವು.
ನಗರದಲ್ಲಿ ಅಂಗಡಿಕಾರರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿ  ಶಿರಸಿ ಬಂದ್ ಗೆ ಬೆಂಬಲ ನೀಡಿದರು.  500ಕ್ಕೂ ಹೆಚ್ಚು ಜನ ಮೆರವಣಿಗೆ ನಡೆಸಿ ಶಿರಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.
 ಘಟ್ಟದ ಮೇಲಿನ ಎಲ್ಲಾ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಸಹಕಾರ ಕೋರಲಾಗಿದ್ದು .  ಪ್ರಸಕ್ತ  ಬಜೆಟ್ ನಲ್ಲಿ ಶಿರಸಿ ಜಿಲ್ಲೆಯನ್ನಾಗಿ ಘೋಷಣೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.
-ಉಪೇಂದ್ರ ಪೈ. ಶಿರಸಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ