ಪಠ್ಯ ಪುಸ್ತಕ ಪುನರ್ ರಚನಾ ಸಮೀತಿಯ ಗೊಂದಲ; ಕವಿತೆ ವಾಪಸ್ ಪಡೆದ ಡಾ. ಸರಜೂ ಕಾಟ್ಕರ್
ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ – ಈಗಿನ ಪಠ್ಯ ಪುಸ್ತಕ ಪುನರ್ ರಚನಾ ಸಮೀತಿ ಮತ್ತು ಅದರ ನಿಲುವುಗಳ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಲಿದ್ದು ವಿದ್ಯಾರ್ಥಿಗಳಲ್ಲಿ, ಶೈಕ್ಷಣಿಕ ಕ್ಷೇತ್ರದಲ್ಲಿ, ಪಾಲಕರಲ್ಲಿ ಹಾಗೂ ಇಡೀ ಜನ ಸಮುದಾಯದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಒಂಬತ್ತನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ನಾನು ರಚಿಸಿದ ಶಬ್ದಗಳು ಎಂಬ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ. ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ. ಸಿ. ನಾಗೇಶ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
ಈ ಹಿಂದೆ ಒಂಬತ್ತನೇ ತರಗತಿಯ ಕನ್ನಡ ತೃತೀಯ ಭಾಷೆ ಪಠ್ಯಪುಸ್ತಕದಲ್ಲಿ ನಾನು ರಚಿಸಿದ, ಶಬ್ದಗಳು ಎಂಬ ಕವಿತೆಯನ್ನು ಅಳವಡಿಸಿಕೊಳ್ಳಲಾಗಿತ್ತು. ನನ್ನ ನಂಬಿಕೆ ಮತ್ತು ಇಷ್ಟು ವರ್ಷಗಳ ಕಾಲದ ಬದ್ಧತೆಯ ಕಾರಣಕ್ಕಾಗಿ ನನ್ನ ಕವಿತೆಗೆ ಈ ಹಿಂದೆ ಕೊಟ್ಟಿರುವ ಒಪ್ಪಿಗೆಯನ್ನು ಹಿಂದೆ ಪಡೆಯುತ್ತಿದ್ದೇನೆ ಎಂಬುದಾಗಿ ಡಾ. ಸರಜು ಕಾಟ್ಕರ್ ಪತ್ರದಲ್ಲಿ ತಿಳಿಸಿದ್ದಾರೆ.
ಸುವರ್ಣವಿಧಾನ ಸೌಧದ ಆವಾರದಲ್ಲಿ ಶಾವಿಗೆ, ಹಪ್ಪಳ, ಸಂಡಿಗೆ !
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ