ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆನ್ ಲೈನ್ ಗ್ಲ್ಯಾಬ್ಲಿಂಗ್, ಬೆಟ್ಟಿಂಗ್ ದಂಧೆ ನಿಷೇಧಿಸುವ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆ ಮಾಡಲಾಗಿದೆ.
ವಿಧಾನಸಭೆಯಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಅಪರಾಧವಾಗಿದ್ದು, ಅಂತವರಿಗೆ 1ರಿಂದ 3 ವರ್ಷಗಳ ವರೆಗೆ ಜೈಲುಶಿಕ್ಷೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ಈ ತಿದ್ದುಪಡಿ ವಿಧೇಯಕ ಲಾಟರಿ, ಕುದುರೆ ರೇಸ್ ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ. ಆನ್ ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ನಲ್ಲಿ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ವಿವಿಐಪಿಗಳ ಭದ್ರತೆಗೆ ಮೊದಲ ಬಾರಿ ಮಹಿಳಾ ಸಿಬ್ಬಂದಿಗಳ ನೇಮಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ