Kannada NewsKarnataka NewsLatest

*ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕರ ಭರ್ಜರಿ ಗಿಫ್ಟ್ ನೀಡಿದೆ. ಪೊಲೀಸ್ ಸಿಬ್ಬಂದಿಗಳಿಗೆ ಕುಟುಂಬದೊಂದಿಗೆ ಕಾಲಕಳೆಯಲು ರಜೆಯ ಭಾಗ್ಯ ನೀಡಲಾಗಿದೆ.

ಕರ್ನಾಟಕ ಪೊಲೀಸ್ ಸಿಬ್ಬಂದಿಗಳಿಗೆ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲಿಂ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಸಿಬ್ಬಂದಿಗಳು ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವದ ಸಂದರ್ಭಗಳಲ್ಲಿ ವಿಶೇಷವಾಗಿ ರಜೆ ತೆಗೆದುಕೊಳ್ಳುವುದರಿಂದ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳುತ್ತಾರೆ. ಜೊತೆಗೆ ಕುಟುಂಬದೊಂದಿಗೆ ಉತ್ತಮ ಸಮಯಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುತ್ತದೆ. ಒತ್ತಡ ಕಡಿಮೆಯಾಗಿ ಮನೋಬಲ ಹೆಚ್ಚಾಗುತ್ತದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Home add -Advt

Related Articles

Back to top button