
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರ ಅನಾಹುತಗಳನ್ನೇ ಸೃಷ್ಟಿಸಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ನಿನ್ನೆಯಿಂದ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ವರುಣಾರ್ಭಟ ತಣ್ಣಗಾಗಿದೆ. ಆದರೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ನಡುವೆ ಇನ್ನೂ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ , ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯದಲ್ಲಿ ಜೂನ್ 4ರಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



