Kannada NewsKarnataka NewsLatest

*ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಯಾವ ಜಿಲ್ಲೆಗೆ ಯಾವ ಅಲರ್ಟ್? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಸೆ.5ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಧಾರವಡ, ಚಿಕ್ಕಮಗಳೂರು, ಕೊಡಗು, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button