Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಸೆ.6ರವರೆಗೂ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮತ್ತೆ ಜೋರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಮಳೆ ಅಬ್ಬರ ಇರಲಿದೆ.

Home add -Advt

ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಯಾದಗಿರಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Related Articles

Back to top button