Kannada NewsKarnataka NewsLatest

*ಹತ್ತು ಜಿಲ್ಲೆಯಲ್ಲಿ ಮುಂದಿನ ಮುರ್ನಾಲ್ಕು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂದಿನ 4-5 ದಿನ ಮಳೆರಾಯ ಉತ್ತಮ ಮಳೆ ಆಗಲಿದೆ ಎಂದು ಭಾರತೀಯ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಸೆ. 24 ರವರೆಗೂ ರಾಜ್ಯದ 10 ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದೆಮ ಇಂದಿನಿಂದ ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ರವಿವಾರ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಹಾಗೆಯೇ, ಬೆಂಗಳೂರಲ್ಲೂ ಮಳೆ ಮುಂದುವರಿಯಲಿದೆ. ಇವತ್ತು ಹಾಗೂ ನಾಳೆ ಸೆಪ್ಟೆಂಬರ್ 21 ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಮುಂದುವರೆದಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button