Kannada NewsKarnataka NewsLatest

*ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೊಂಚ ಕಡಿಮೆಯಾಗಿದ್ದ ಮಳೆ ಅಬ್ಬರ ಮತ್ತೆ ಜೋರಾಗಿದೆ. ರಾಜ್ಯಾದ್ಯಂತ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಅಕ್ಟೋಬರ್ 27ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ಸುತ್ತಮುತ್ತ ಮೋಡಕವಿದ ವಾತಾವರಣ ಹಾಗೂ ಗುಡುಗು ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ,ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button