Latest

ರಮೇಶ್ ಜಾರಕಿಹೊಳಿ ಪರ ಆರ್.ಅಶೋಕ್

ಪ್ರಗತಿವಾಹಿನಿ ಸುದ್ದಿ; ಹಾಸನ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮರಳಿ ಮಂತ್ರಿ ಸ್ಥಾನ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ರಮೇಶ್ ಪರ ಬ್ಯಾಟ್ ಬೀಸಿರುವ ಕಂದಾಯ ಸಚಿವ ಆರ್.ಅಶೋಕ್ ಬಿಜೆಪಿ ಸರ್ಕಾರ ರಚನೆಯಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಮಹತ್ವದ್ದಾಗಿದೆ ಎಂದಿದ್ದಾರೆ.

ಹಾಸನದಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ರಮೇಶ್ ಜಾರಕಿಹೊಳಿ ಬಿಜೆಪಿ ಬಿಡಲ್ಲ. ಪಕ್ಷದಲ್ಲಿಯೇ ಇರುತ್ತಾರೆ. ಬಿಜೆಪಿ ಸರ್ಕಾರ ಬರಲು ರಮೇಶ್ ಕೂಡ ಪ್ರಮುಖ ಕಾರಣರು. ಅವರು ಪಕ್ಷದಲ್ಲಿಯೇ ಇರುತ್ತಾರೆ. ಈ ನಿಟ್ಟಿನಲ್ಲಿ ಯಾವುದೇ ಗೊಂದಲಗಳೂ ಇಲ್ಲ ಎಂದರು.

Home add -Advt

ಇನ್ನು ಸಚಿವ ಸ್ಥಾನ ವಿಚಾರವಾಗಿ, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀದುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಈ ಬಗ್ಗೆ ವರಿಷ್ಠರು ಚರ್ಚಿಸಿ ಅಂತಿಮವಾಗಿ ತೀರ್ಮಾನಿಸುತ್ತಾರೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿಗೆ ಶೀಘ್ರ ಮಂತ್ರಿಸ್ಥಾನ…!

Related Articles

Back to top button