
ಪ್ರಗತಿವಾಹಿನಿ ಸುದ್ದಿ: ರಾಜ್ಯದ 17 ಕ್ಕೂ ಅಧಿಕ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅನೇಕ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಣೆ ಮಾಡಲಾಗಿದೆ.
ಇಂದು ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಿಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮೈಸೂರು, ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಬೆಂಗಳೂರಲ್ಲಿ ಮುಂದಿನ ನಾಲ್ಕ ದಿನಗಳ ಕಾಲ ಮಳೆ ಮುಂದುವರಿಯಲಿದ್ದು ಗರಿಷ್ಠ ತಾಪಮಾನ 28-29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ.
ಆಗಸ್ಟ್ 12ಹಾಗೂ 13 ರಂದು ಕರ್ನಾಟದ ಬಹುತೇಕ ಕಡೆ ಗಾಳಿಯ ಆರ್ಭಟ ಇರಲಿದೆ. ನಂತರ 14 ರಂದು ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದ್ದು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಬೀಳುವ ಕುರಿತು ಅಂದಾಜಿಸಲಾಗಿದೆ.
ನಾಳೆ ಕರಾವಳಿ ಜಿಲ್ಲೆಗಳು, ರಾಯಚೂರು, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಆಗಸ್ಟ್ 13 ರಂದು ಮಳೆ ಕೊಂಚ ತಗ್ಗಲಿದ್ದು 14 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅದೇ ರೀತಿಯಾಗಿ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ರಾಮನಗರ, ಮೈಸೂರು, ಕೋಲಾರ, ಮಂಡ್ಯ ಮೈಸೂರು ಮುಂತಾದ ಕಡೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.