Kannada NewsKarnataka NewsLatest

*ಮುಂದುವರೆದ ಮಳೆ ಅಬ್ಬರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮಳೆಯ ಅಬ್ಬರ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ಯಾದಗಿರಿ, ವಿಜಯಪುರ, ಕೊಡಗು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಕೋಲಾರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಪ್ಪಳ, ರಾಯಚೂರು, ಗದಗ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button