Kannada NewsKarnataka NewsLatest

*ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆಲಾಡು, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ಬಿರುಗಳಿ ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಬೀದರ್,ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಧಾರವಾಡ, ಬಳ್ಳಾರಿ, ಗದಗ, ಕೊಪ್ಪಳ, ಯಾದಗಿರಿ, ಕಲಬುರಗಿ, ಬಾಗಲಕೋಟೆ, ವಿಜಯಪುರ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button