Kannada NewsKarnataka NewsLatest
*ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಲವೆಡೆ ಮೋಡಕವಿದ ವಾತಾವರಣ, ಚಳಿ ಆರಂಭವಗಿದೆ. ಈ ನಡುವೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಾಗೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಮಾಹಿತಿ ನೀಡಿದೆ.



