Kannada NewsKarnataka NewsLatest

*ಮಳೆ ಅಬ್ಬರ: ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಜೂನ್ 24ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಕರಾವಳಿ ಹಾಗೂ ಮಲೆನಾಡಿನ ಕೆಲ ಪ್ರದೇಶಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಮಂಡ್ಯ, ವಿಜಯನಾರ, ತುಮಕೂರು, ಕೊಪ್ಪಳಮ್ ಗದಗ, ರಾಯಚೂರು, ಯಾದಗಿರಿ, ಕಲಬುರಗಿ ಹಾವೇರಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


Related Articles

Back to top button