Karnataka News

*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ 11 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮೈಸೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಿದ್ದು, ನಿರಂತರಾವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಮಳೆಯಿಂದಾಜಿ ಜನಜೀವನ ಸಪೂರ್ಣ ಅಸ್ತವ್ಯಸ್ಥವಾಗಿದೆ. ತಗ್ಗು ಪ್ರದೇಶಗಳಿಗೆ, ರಸ್ತೆಗಳ ಮೇಲೆ ಪ್ರವಾಹ ರೀತಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಹಲವೆಡೆ ಗೋಡೆ ಕುಸಿದು ಅನಾಹುತಂಸಂಭವಿಸಿದೆ.

ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button