Kannada NewsKarnataka NewsLatest

*ಮುಂದಿನ 48 ಗಂಟೆ ಜೋರಾಗಲಿದೆ ಮಳೆ*

ಪ್ರಗತಿವಾಹಿನಿ ಸುದ್ದಿ: ಎರಡು ದಿನ ಮಳೆ ಪ್ರಮಾಣ ಕಡಿಮೆ ಆಗಿತ್ತು ಇದರ ಪರಿಣಾಮ ಜನ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮುಂದಿನ 48 ಗಂಟೆಗಳವರೆಗೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಸ್ಥಳಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

Home add -Advt

ಇನ್ನು ಆ.24 ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ.

ಹಾಗೆಯೇ ಆ.25 , 26ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆಯಿದೆ.

ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಂಭವ ಇದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಗುಡುಗು ಮತ್ತು ಜೋರಾದ ಗಾಳಿಯೊಂದಿಗೆ ಮಧ್ಯಮ ಮಟ್ಟದ ಮಳೆಯಾಗಬಹುದು ಎನ್ನಲಾಗಿದೆ. ಇಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನೂ ಆಗಸ್ಟ್ 27 ರಿಂದ ಮತ್ತೆ ಮಳೆ ಚುರುಕುಗೊಳ್ಳಲಿದ್ದು8 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಬೀಳಲಿದೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಮಳೆ ಪ್ರಮಾಣ ಕೊಂಚ ತಗ್ಗಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ

ಇನ್ನು28ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಗುಡುಗು ಸಹಿತ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button