*5 ದಿನಗಳ ಕಾಲ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ತುಂತುರು ಮಳೆ ಆರಂಭವಾಗಿದೆ.

https://pragati.taskdun.com/3-youthsdeathholalkeregundi-lakechitradurga/

Related Articles

Back to top button