Kannada NewsKarnataka NewsLatest
*ಕೊಂಚ ಕಡಿಮೆಯಾದ ಚಳಿ ಪ್ರಮಾಣ: ಆದರೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೈ ಕೊರೆವ ಚಳಿ ಪ್ರಮಾಣ ಕೊಂಚ ತಗ್ಗಿದೆ. ಆದರೆ ಮೋಡ ಕವಿದ ವಾತಾವರಣವಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿಇದೆ.
ಬೆಂಗಳೂರು, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು,ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೋಲಾರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಧಾರವಾಡ, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಬಳ್ಳಾರಿ, ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ




