
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ತಗ್ಗಿದೆ. ರಾಜ್ಯಾದ್ಯಂತ ಆಗಸ್ಟ್ 7ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೂಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗವು ಉತ್ತರ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ 40-50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಬೀದರ್, ಹಾವೇರಿ, ಧಾರವಾಡ, ರಾಯಚೂರು, ಕಲಬುರಗಿ, ಕೊಪ್ಪಳ, ಗದಗ, ವಿಜಯಪುರ, ಯಾದಗಿರಿ, ತುಮಕೂರು, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.