Kannada NewsKarnataka NewsLatest

*ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ರಾಜ್ಯಾದ್ಯಂತ ಮುಂದಿನ ಒಂದುವಾರಗಳ ಕಾಲ ಸಾಧಾರಣ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಗುಡುಗು ಮಳೆಯಾಗುವ ಸಾಧ್ಯತೆ ಇದೆ.

Home add -Advt

ಗಾಳಿಯು ಗಂಟೆಗೆ 30-40 ಕೀ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಬೀದರ್, ಕಲಬುರ್ಗಿಯಲ್ಲಿ ಮಳೆಯಾಗಲಿದೆ. ರಾಯಚೂರು, ಯದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಸಾಧಾರಣ ಮಳೆಯಾಗಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button