ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೈರುತ್ಯ ಮುಂಗಾರು ಅಂತ್ಯಗೊಂಡರೂ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅಕ್ಟೋಬರ್ 15ರವರೆಗೂ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ. ಅ.10ರಿಂದ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ ಎಂದು ತಿಳಿಸಿದೆ.
ಈಗಾಗಲೇ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಗೆ ಮತ್ತೆ ನೆರೆ ಪರಿಸ್ಥಿತಿಯುಂಟಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅಲ್ಲಲ್ಲಿ ಭಾರಿ ಮಳೆಯಾಗುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರೆಯಲಿದೆ.
ಜೂನ್ 1ರಿಂದ ಸೆ.30ರವರೆಗೆ ಇದ್ದ ನೈಋತ್ಯ ಮುಂಗಾರಿನಲ್ಲಿ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಶೇ.20ಕ್ಕಿಂತ ಅಧಿಕ ಮಳೆಯಾಗಿದೆ.
BJPಯಲ್ಲಿ ಯಾರೂ ಬೇಲ್ ಮೇಲೆ ಇಲ್ವಾ? ಸಿಎಂಗೆ ಟಾಂಗ್ ನೀಡಿದ ಸಿದ್ದರಾಮಯ್ಯ
https://pragati.taskdun.com/politics/siddaramaiahcm-basavaraj-bommaiattack/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ