*ಬೆಳಗಾವಿಯ ಮೂವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್, ಬೆಳಗಾವಿಯ ಮೂವರಿಗೆ ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಸರಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿ -2025ಕ್ಕೆ ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ್ ಅವರ ಧರ್ಮಪತ್ನಿ, ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ನಾಗರಾಜ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.
ಸಂಕೀರ್ಣ ಕ್ಷೇತ್ರದಲ್ಲಿ ಪುಂಡಲಿಕ ಶಾಸ್ತ್ರಿ ಬುಡಬುಡಿಕೆ ಮತ್ತು ಜಾನಪದ ಕ್ಷೇತ್ರದಲ್ಲಿ ಸನ್ನಿಂಗಪ್ಪ ಸತ್ಯಪ್ಪ ಮುಶನ್ನಗೊಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.




