ಮಹಾ ಸಚಿವರನ್ನು ಬೆಳಗಾವಿಯೊಳಗೆ ಬಿಟ್ಟುಕೊಂಡರೆ ಪಾಠ ಕಲಿಸುವುದು ನಿಶ್ವಿತ: ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮರಾಠಿ ಭಾಷಿಕರು ಮತ್ತು ಕನ್ನಡಿಗರು ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ಧ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಿ, ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಹಾಗೂ ಶಾಂತಿ ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾಗುತ್ತದೆ ಎಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸರುವ ದೀಪಕ ಗುಡಗನಟ್ಟಿ, ಈ ವಿಚಾರದಲ್ಲಿ ಕರ್ನಾಟಕ ಸರಕಾರ ಕೂಡಲೇ ಕ್ರಮ ಜರುಗಿಸಬೇಕು ಮಹಾರಾಷ್ಟ್ರ ಸರಕಾರ ಭಾರತದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದು, ಪ್ರಧಾನಿ ಬಳಿ ನಿಯೋಗ ಕೊಂಡೊಯ್ದು ಕೇಂದ್ರ ಸರಕಾರ ಮಹಾರಾಷ್ಟ್ರ ಸರಕಾರಕ್ಕೆ ಲಗಾಮು ಹಾಕುವಂತೆ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.
ಡಿಸೆಂಬರ್ 3 ರಂದು ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜೆ ಅವರು ಬೆಳಗಾವಿಯಲ್ಲಿ ಸಭೆ ನಡೆಸುವದಾಗಿ, ಟ್ವೀಟ್ ಮಾಡಿದ್ದು, ರಾಜ್ಯ ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಗಣಿಸದಿದ್ದರೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಇಬ್ಬರು ಸಚಿವರು ಬೆಳಗಾವಿಯಲ್ಲಿ ನಡೆಸುವ ಸಭೆಗೆ ನುಗ್ಗುವುದು ನಿಶ್ಚಿತ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಗಡಿವಿವಾದದ ಕುರಿತು ಮಹಾರಾಷ್ಡ್ರ ಸರಕಾರವೇ ಸುಪ್ರೀಂ ಕೋರ್ಟಿನ ಮೆಟ್ಟಲೇರಿದೆ, ಕೋರ್ಟಿನ ತೀರ್ಪು ಬರುವವರೆಗೂ ಕಾಯಬೇಕಾದ ಮಹಾರಾಷ್ಟ್ರ ಸರಕಾರ ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುತ್ತಿದೆ.ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಅದಕ್ಕೂ ಮೊದಲು ಬೆಳಗಾವಿ ಎಂಇಎಸ್ ನಾಯಕರು ಮಹಾರಾಷ್ಟ್ರದ ಇಬ್ಬರು ಸಚಿವರನ್ನು ಬೆಳಗಾವಿಗೆ ಕರೆಯಿಸಿ ಶಾಂತಿಗೆ ಭಂಗ ತರುವ ಹುನ್ನಾರ ನಡೆಸಿದ್ದು, ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿಗೆ ಬರುವಂತೆ ಪತ್ರ ಬರೆದಿರುವ ಎಂಇಎಸ್ ನಾಯಕರನ್ನು ಕೂಡಲೇ ಬಂಧಿಸಬೇಕೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಡಿ ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ತಲ್ಲಣವೆಬ್ಬಿಸಿದ ಬೊಮ್ಮಾಯಿ ಮಾಸ್ಟ್ರ್ ಸ್ಟ್ರೋಕ್!; ಇಂಗು ತಿಂದ ಮಂಗನಂತಾದ ಮಹಾನಾಯಕರು!!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ