ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ 3ರಂದು ಬೆಳಗಾವಿಗೆ ಆಗಮಿಸಲಿರುವ ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಿಸಲು ಅವಕಾಶ ನೀಡದಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ನಿಯೋಗ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕ ಮನವಿ ಸಲ್ಲಿಸಿದೆ.
ಬೆಳಗಾವಿಯ ಎಂಇಎಸ್ ನಾಯಕರು ಮಹಾರಾಷ್ಟ್ರದ ಸಚಿವರನ್ನು ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಮಾಡಿಸಿ ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಿ ಭಾಷಾ ವೈಷಮ್ಯದ ವಿಷಬೀಜ ಬಿತ್ತುವ ಮೂಲಕ ಮಹಾನಗರದ ಶಾಂತಿಗೆ ಭಂಗ ತರಲು ಹುನ್ನಾರ ನಡೆಸುತ್ತಿದ್ದಾರೆ.
ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿಗೆ ಬರುವಂತೆ ಪತ್ರ ಬರೆದ ಎಂಇಎಸ್ ನಾಯಕರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಉಪಾಧ್ಯಕ್ಷ ಸುರೇಶ ಗವನ್ನವರ, ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮತ್ತಿತರರು ಮನವಿ ಸಲ್ಲಿಸಿದ ನಿಯೋಗದಲ್ಲಿದ್ದರು.
ನಾಳೆ ಭುವನಗಿರಿಯಲ್ಲಿ ಕನ್ನಡ ಜ್ಯೋತಿ ಹೊತ್ತ ‘ಕನ್ನಡ ರಥ’ಕ್ಕೆ ಚಾಲನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ