ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಗಡಿ ವಿವಾದದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ಕೊಡಲೇ ಕನ್ನಡ ಸಂಘಟನೆಗಳ ಸಭೆ ಕರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಬೆಳಗಾವಿ ಗಡಿ ವಿವಾದದ ಕುರಿತು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವಿಚಾರವಾಗಿ ನವೆಂಬರ್ 23 ರಂದು ಅಂತಿಮ ವಿಚಾರಣೆ ನಡೆಯಲಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಗಡಿ ಸಂರಕ್ಷಣಾ ಅಯೋಗವು ನಿಷ್ಕ್ರಿಯವಾಗಿದೆ. ಗಡಿ ವಿವಾದದ ಕುರಿತು ಅಂತಿಮ ಹಂತದ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾನೂನಾತ್ಮಕ ಹೊರಾಟದ ಮೇಲೆ ನಿಗಾ ಇಡಲು, ಸರ್ಕಾರ ವಿಶೇಷ ಆಸಕ್ತಿ ವಹಿಸಬೇಕು, ಗಡಿ ಸಂರಕ್ಷಣಾ ಆಯೋಗಕ್ಕೆ ಕ್ರೀಯಾಶೀಲ ಅಧ್ಯಕ್ಷರನ್ನು ನೇಮಿಸುವುದು ಸೇರಿದಂತೆ ಕನ್ನಡ ನೆಲ, ಜಲ ಭಾಷೆಯರು ಸಂರಕ್ಷಣೆಯ ಕುರಿತು ಹತ್ತು ಹಲವು ವಿಚಾರಗಳನ್ನು ಸರ್ಕಾರದ ಗಮನಕ್ಕೆ ತರಬೇಕಾಗಿದೆ ಆದಷ್ಟು ಬೇಗ ಕನ್ನಡಪರ ಸಂಘಟನೆಗಳ ಸಭೆಯನ್ನು ಬೆಂಗಳೂರಿನಲ್ಲಿ ಅಥವಾ ಬೆಳಗಾವಿಯಲ್ಲಿ ಕರೆದು ಕನ್ನಡ ಸಂಘಟನೆಗಳ ಸಮಾಲೋಚನೆ ನಡೆಸಬೇಕು ಎಂದು ಮನವಿ ಮಾಡಿದೆ.
ಈ ಭಾರಿಯ ರಾಜ್ಯೋತ್ಸವದ ಸಂದರ್ಭದಲ್ಲಿ ಬೆಳಗಾವಿ ಗಡಿ ರಕ್ಷಣೆಗಾಗಿ ಹೋರಾಡಿದ ಇಬ್ಬರು ಅಪ್ಪಟ ಕನ್ನಡ ಹೋರಾಟಗಾರರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರಾನಿಸಬೇಕು ಎಂದು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನರೇಗಾ ಯೋಜನೆಯಿಂದ ಗ್ರಾಮೀಣಾಭಿವೃದ್ಧಿ ಸಾಧ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
https://pragati.taskdun.com/politics/satish-jarakiholinarega-projectyamakanamaradi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ