ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಸೆ.23ರವರೆಗೆ ಉಭಯಸದನಗಳ ಕಲಾಪಗಳು ನಡೆಯಲಿವೆ.
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಸಚಿವ ಉಮೇಶ್ ಕತ್ತಿ, ಮಾಜಿ ಸಚಿವರಾಗಿದ್ದ ಎಂ.ರಘುಪತಿ, ಪ್ರಭಾಕರ್ ರಾಣೆ, ಮಾಜಿ ಶಾಸಕ ಯಾದವ್ ರಾವ್, ಕೆ.ಕೆಂಪೇಗೌಡ, ಜಿ.ವಿ.ಶ್ರೀರಾಮರೆಡ್ಡಿ, ಹಿನ್ನೆಲೆ ಗಾಯಕ ಶಿವಮೊಗ್ಗ ಸುಬ್ಬಣ್ಣ ಸೇರಿದಂತೆ ಅಗಲಿದ ನಾಡಿನ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ಅರಣ್ಯ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಉಮೇಶ್ ಕತ್ತಿ ಅವರ ಹಠಾತ್ ನಿಧನದ ವಿಚಾರವಾಗಿ ಸಂತಾಪ ಸೂಚನೆ ವೇಳೆ ಉಮೇಶ ಕತ್ತಿ ಅವರ ಸಾಧನೆ, ಅವರ ಹೋರಾಟ ಹಾಗೂ ಅವರೊಂದಿಗಿನ ತಮ್ಮ ಒಡನಾಟದ ಬಗ್ಗೆ ಮಾತನಾಡುತ್ತಾ ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆಯೂ ನಡೆಯಿತು.
ಇನ್ನು ಈ ಬಾರಿ ಅಧಿವೇಶನಲ್ಲಿ ವಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ 40% ಕಮಿಷನ್ ವಿಚಾರ, ಪಿಎಸ್ ಐ ಹಗರಣ, ಭೂ ಅಕ್ರಮ, ಭ್ರಷ್ಟಾಚಾರ, ಬೆಂಗಳೂರಿನಲ್ಲಿ ಪ್ರವಾಹ, ಅತಿವೃಷ್ಟಿಯಿಂದ ಹಾನಿ, ಪರಿಹಾರ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ವಿಪಕ್ಷಗಳಿಗೆ ತಕ್ಕ ತಿರುಗೇಟು ನೀಡಲು ಆಡಳಿತ ಪಕ್ಷ ಬಿಜೆಪಿ ಸಿದ್ಧತೆ ನಡೆಸಿದೆ.
ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ
https://pragati.taskdun.com/politics/c-t-ravisiddaramaiahstatments/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ