Uncategorized

*ಇಂದಿನಿಂದ ವಿಧಾನಮಂಡಲ ಅಧಿವೇಶನ; ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.

ಅಧಿವೇಶನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

2 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ಧರಣಿ, ಮೆರವಣಿಗೆ ನಡೆಸುವಂತಿಲ್ಲ, ಹೆಚ್ಚಿನ ಜನರು ಸೇರುವಂತಿಲ್ಲ. ವಿಧಾನಸೌಧ ಸುತ್ತಮುತ್ತ ಭದ್ರತೆಗಾಗಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ 3 ಡಿಸಿಪಿ, 15 ಎಸಿಪಿ, 80 ಇನ್ಸ್ ಪೆಕ್ಟರ್ ಗಳು ಸೇರಿದಂತೆ 1500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button