ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೇ ಕಾನೂನಾತ್ಮಕ ಚರ್ಚೆ ಮಾಡಿ , ಎಲ್ಲ ಪಕ್ಷದ ನಾಯಕರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗ ಇಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಈ ಕುರಿತು ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಇಂದು ಬೆಳಿಗ್ಗೆ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಭೇಟಿಯಾಗಿ ಮಧ್ಯಂತರ ವರದಿಯನ್ನು ನೀಡಿದ್ದಾರೆ. ಈ ವರದಿಯನ್ನು ಪರಿಶೀಲಿಸಿ, ಕಾನೂನು ಮತ್ತು ಸಂಸದೀಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ನಾಗಮೋಹನ್ ದಾಸ್ ವರದಿ ಬಂದು ಒಂದು ವರ್ಷದ ನಂತರ ವಿವರಗಳನ್ನು ನೀಡಲಾಗಿತ್ತು. ಸದಾಶಿವ ಆಯೋಗ ವರದಿ ಬಂದು ಹತ್ತು ವರ್ಷವಾಗಿದ್ದು, ಸರ್ಕಾರದ ಒಪ್ಪಿಗೆ ಪಡೆದಿಲ್ಲವಾದ್ದರಿಂದ ಇನ್ನೂ ವಿವರ ನೀಡಲಾಗಿಲ್ಲ. ಕಾಂತರಾಜು ವರದಿ ಇನ್ನೂ ಆಯೋಗದಲ್ಲೇ ಇದ್ದು, ಸರ್ಕಾರದ ಮಟ್ಟಕ್ಕೆ ಬಂದಿಲ್ಲವಾದ್ದರಿಂದ ವಿವರ ನೀಡಲಾಗಿಲ್ಲ. ಆದರೆ ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿ ಬಗ್ಗೆ ಆದಷ್ಟು ಶ್ರೀಘ್ರವಾಗಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
*ಮಧ್ಯಾಹ್ನ ಸಿಎಂ ನೇತೃತ್ವದಲ್ಲಿ ಕೋವಿಡ್ ಮೀಟಿಂಗ್; ಹೊಸ ವರ್ಷಾಚರಣೆ ಮತ್ತೆ ಬೀಳುತ್ತಾ ಬ್ರೇಕ್?*
https://pragati.taskdun.com/karnatakacovid-casecm-basavaraj-bommaimeeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ