Kannada NewsLatest

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ನೂತನ ಕಾರ್ಯಕಾರಿ ಸಮಿತಿ ರಚನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ನೂತನ ಕಾರ್ಯಕಾರಿ ಸಮಿತಿ ರಚನೆ ಮಾಡಲಾಗಿದೆ. ಇತ್ತೀಚೆಗೆ ಪಟ್ಟಣದ ಶಿವಬಸವ ನಗರದಲ್ಲಿನ ಡಾ. ಸ.ಜ.ನಾಗಲೋಟಿಮಠ ವಿಜ್ಞಾನ ಕೇಂದ್ರದಲ್ಲಿ ನಡೆದ ದಾನಿ, ದಾನಿ ಸಂಸ್ಥೆ ಹಾಗೂ ಸರ್ವಸದಸ್ಯರ ಸಭೆಯಲ್ಲಿ 10 ಜನ ಪದಾಧಿಕಾರಿಗಳು ಜಿಲ್ಲಾ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ಮಾಜಿ ಸದಸ್ಯರಾದ ಮೋಹನ ಬಸವನಗೌಡ ಪಾಟೀಲ, ಉಪಾಧ್ಯಕ್ಷರುಗಳಾಗಿ ಬೈಲಹೊಂಗಲ ತಾಲೂಕಿನ ಮಲ್ಲಾಪೂರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಿ. ಬಿ. ಸರಾಯದ, ಸವದತ್ತಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ವ್ಹಿ. ಸಿ. ಹಿರೇಮಠ, ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಕೋಳಿ, ಜಂಟಿ ಕಾರ್ಯದರ್ಶಿಗಳಾಗಿ ಸವದತ್ತಿ ತಾಲ್ಲೂಕಿನ ನುಗ್ಗಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎಂ. ಬಿ. ತೋರಣಗಟ್ಟಿ, ಖಜಾಂಚಿಗಳಾಗಿ ಪ್ರೇರಣಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿರೀಶ ಚಿನ್ನಪ್ಪಗೌಡರ, ಸದಸ್ಯರುಗಳಾಗಿ ಬೈಲಹೊಂಗಲದ ಇಂದಿರಾನಗರದ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಪ್ರಧಾನ ಗುರುಮಾತೆಯರಾದ ಹೇಮಾವತಿ ಕುಲಕರ್ಣಿ, ಪತ್ರಕರ್ತ, ಯುವ ಸಹಕಾರಿಗಳಾದ ಬಸವರಾಜ ದೊಡಮನಿ, ಬೆಳಗಾವಿಯ ಶ್ರೀ ಸಿದ್ದರಾಮೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಉಪಪ್ರಾಚಾರ್ಯರಾದ ಕೆ. ಬಿ. ಹಿರೇಮಠ, ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯ ನಿವೃತ್ತ ವಿಜ್ಞಾನ ಶಿಕ್ಷಕರಾದ ಆರ್. ಜಿ. ಹಲಗಲಿಮಠ ಅವಿರೋಧವಾಗಿ ಆಯ್ಕೆಯಾದರು.

ವೀಕ್ಷಕರಾಗಿ ಆಗಮಿಸಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಶಂಕರೆಪ್ಪ ತಿಮ್ಮಪ್ಪ ನಾಯಿಕ ನೂತನ ಜಿಲ್ಲಾ ಸಮಿತಿ ಸದಸ್ಯರಿಗೆ ಅಭಿನಂದಿಸಿ ಮಾತನಾಡಿ ಜಿಲ್ಲಾ ಮಟ್ಟದಲ್ಲಿ ವಿಚಾರ ವೇದಿಕೆ, ಸಭೆ, ಚರ್ಚಾಗೋಷ್ಠಿ, ವಿಚಾರ ಸಂಕಿರಣಗಳನ್ನು ಏರ್ಪಡಿಸುವುದರೊಂದಿಗೆ ಪರಿಷತ್ತಿನ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಎಲ್ಲರೂ ಪ್ರಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಸಮಿತಿಯ ಹೊಣೆಗರಿಕೆಯನ್ನು ಮನದಟ್ಟು ಮಾಡಿಕೊಟ್ಟರು.

ಪ್ರತಿಷ್ಠಿತ ಜಿ.ನಾರಾಯಣಸ್ವಾಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಈಶ್ವರ ಹೋಟಿ ಮಾತನಾಡಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜನರಲ್ಲಿ ವೈಜ್ಞಾನಿಕ ಮನೋಬಾವ ಬೆಳೆಸುವ ಹಾಗೂ ವಿಜ್ಞಾನ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪಿತವಾದ ರಾಜ್ಯದ ಪ್ರಮುಖ ಸಂಸ್ಥೆಯಾಗಿದ್ದು ನೂತನವಾಗಿ ಆಯ್ಕೆಯಾದ ಜಿಲ್ಲಾ ಸಮಿತಿಯಿಂದ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪರಿಷತ್ತನ್ನು ಪರಿಚಯಿಸುವ ಕಾರ್ಯಗಳನ್ನು ಮಾಡುವಂತೆ ಸಲಹೆ ನೀಡಿದರು.

ಬೆಳಗಾವಿ ಜಿಲ್ಲಾ ವಿಜ್ಞಾನ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಶಿವಾನಂದ ಕುಡಸೋಮಣ್ಣವರ ಮಾತನಾಡಿ ಪ್ರತಿ ತಿಂಗಳು ಕನಿಷ್ಠ ಒಂದು ವಿಜ್ಞಾನ ಕಾರ್ಯಕ್ರಮವನ್ನು ಆಯೋಜಿಸಿ ವಿಜ್ಞಾನವನ್ನು ಹಳ್ಳಿಹಳ್ಳಿಗಳಿಗೆ ಕೊಂಡೊಯ್ಯುವ ಕೆಲಸಗಳು ಜಿಲ್ಲಾ ಸಮಿತಿಯಿಂದ ಆಗಬೇಕು ಎಂದು ಹೇಳಿದರು.

ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್ ಠಕ್ಕಾಯಿ ಮಾತನಾಡಿ ವಿಜ್ಞಾನ ಪರಿಷತ್ತು ಅನೇಕ ಜನಪ್ರಿಯ ಪುಸ್ತಕಗಳನ್ನು ಪ್ರಕಟಿಸಿದ್ದು ಅವುಗಳನ್ನು ಶಾಲಾ ಕಾಲೇಜುಗಳಿಗೆ ತಲುಪಿಸಿ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಒಲವು ಮೂಡಿಸುವ ಕಾರ್ಯ ಆಗಲಿ ಎಂದು ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾದ ಮೋಹನ ಬಸವನಗೌಡ ಪಾಟೀಲ ಮಾತನಾಡಿ ಪರಿಷತ್ತಿನ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಲು ಶ್ರಮಿಸಿ ಘಟಕವನ್ನು ಸದಾ ಕ್ರಿಯಾಶೀಲವಾಗಿರುವಂತೆ ನೋಡಿಕೊಂಡು ವಿಜ್ಞಾನ ಸೇವೆ ಮಾಡುವ ಭರವಸೆ ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಕೋಶಾಧ್ಯಕ್ಷರಾದ ಎಸ್.ಡಿ ಗಂಗಣ್ಣವರ, ಶಿಕ್ಷಕ ಸಂಘದ ಧುರೀಣರಾದ ಆಶೀಫ ಅತ್ತಾರ, ಈಶ್ವರ ಕಲಗೌಡರ, ವ್ಹಿ. ಎಫ್. ಮರಿತಮ್ಮನವರ, ಪಿ. ಡಿ. ಶಿವನಾಯ್ಕರ ಹಾಗೂ ವಿಜ್ಞಾನ ಪರಿಷತ್ತಿನ ಸದಸ್ಯರು ಹಾಜರಿದ್ದರು. ಹಿರಿಯ ಪತ್ರಕರ್ತರಾದ ಚಂದ್ರಯ್ಯ ಯರಗಟ್ಟಿಮಠ ಸಭೆಯನ್ನು ನಿರ್ವಹಿಸಿದರು.
ರಾಯಬಾರ ಕಚೇರಿ ವಾರ್ನಿಂಗ್: ಜೀವ ಉಳಿಸಿಕೊಳ್ಳಲು ಭಾರತೀಯ ವಿದ್ಯಾರ್ಥಿಗಳ ಪರದಾಟ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button