Kannada NewsKarnataka NewsLatest

ಕರ್ನಾಟಕ ರಾಜ್ಯ ಮಹಿಳಾ ಆಯೋಗ: ಜಿಲ್ಲಾ ಮಟ್ಟದ ಸಭೆ

ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು: ಡಾ.ನಾಗಲಕ್ಷ್ಮೀ ಚೌಧರಿ


ಪ್ರಗತಿವಾಹಿನಿ ಸುದ್ದಿ:
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಹಾಯವಾಣಿ ಸಂಖ್ಯೆ ಪೋಸ್ಟರ್, ಜಾಗೃತಿ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಮಾ.೧೬) ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.


ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ೨೦೨೩-೨೪ ನೇ ಸಾಲಿನಲ್ಲಿ ಸವದತ್ತಿ, ಬೈಲಹೊಂಗಲ ತಾಲೂಕಿನಲ್ಲಿರುವ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿವೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ೩ ತಿಂಗಳಿಗೊಂದು ತಾಲೂಕಾ ಮಟ್ಟದ ಸಭೆ ಕರೆದು ಜಾಗೃತಿಗಳನ್ನು ಮೂಡಿಸಬೇಕು ಎಂದು ಹೇಳಿದರು.


ಸವದತ್ತಿ, ಗೋಕಾಕ್, ರಾಮದುರ್ಗ ತಾಲೂಕಿನ ಅತೀ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಿವೆ ಹಾಗಾಗಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳು ಆಯೋಜನೆ ಮಾಡಬೇಕು ಮತ್ತು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಂಗ್ರಹಿಸಬೇಕು ಎಂದು ತಿಳಿಸಿದರು.

ಪ್ರತಿ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ ದು?ರಿಣಾಮ ಕುರಿತು ಜಾಗೃತಿ ಮೂಡಿಸಬೇಕು. ಸಖಿ ಒನ್ ಸ್ಟಾಪ್ ೧೦೯೮ ಸಹಾಯವಾಣಿ ಸಂಪರ್ಕ ೨೪*೭ ನಿರಂತರ ಚಾಲನೆಯಲ್ಲಿರಬೇಕು. ಸಖಿ ಸಹಾಯವಾಣಿ ಕೇಂದ್ರಗಳ ಸಿಬ್ಬಂದಿಗಳಿಗೆ ಕಳೆದ ೬ ತಿಂಗಳಿಗೆ ವೇತನ ಪಾವತಿಸುವ ತೊಂದರೆಯಾಗುತ್ತಿದೆ. ಕೂಡಲೇ ಇದನ್ನು ಸಂಬಂಧಿಸಿದ ಸಚಿವರ ಗಮನಕ್ಕೆ ತಂದು ವೇತನ ಪಾವತಿಗೆ ಕ್ರಮ ವಹಿಸಲಾಗುವುದು ಎಂದರು. ಉಜ್ವಲ ಮಹಿಳಾ ಸಂರಕ್ಷಣೆ ಕೇಂದ್ರಗಳಲ್ಲಿ ಇತರೆ ರಾಜ್ಯಗಳಿಂದ ಬಂದಂತಹ ಮಹಿಳೆಯರನ್ನು ರಕ್ಷಣೆ ಮಾಡಿ ಅವರಿಗೆ ಆಶ್ರಯ ನೀಡಲಾಗುತ್ತಿದೆ. ಹಣದ ಆಮಿ?ದಿಂದ ಗಡಿ ಭಾಗದಲ್ಲಿನ ಹೆಚ್ಚಿನ ಮಹಿಳೆಯರು ಕಾಣೆಯಾಗಿರುವುದು ಕಂಡು ಬರುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ವರದಿ ಕೊಡಬೇಕು. ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮಗಳು ಆಗಿರುವ ಕುರಿತು ದಾಖಲೆಗಳನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ತಿಳಿಸಿದರು. ಜಿಲ್ಲೆಯ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಮಹಿಳೆಯರ ದೌರ್ಜನ್ಯ, ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ರಕ್ಷಣಾತ್ಮಕ ತರಬೇತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ.

ರೈಲ್ವೆ ಸ್ಟೇ?ನ್, ಬಸ್ ನಿಲ್ದಾಣ, ಗಡಿ ಪ್ರದೇಶದಲ್ಲಿ, ಜನ ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಕೂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಎಸ್.ಪಿ ಭೀಮಾಶಂಕರ ಗುಳೇದ ಅವರು ತಿಳಿಸಿದರು.


ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರನ್ನು ಜಿಲ್ಲೆಯ ಮೂರು ಸೇವಾ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುತ್ತಿದೆ. ಮೂರು ಸಂಸ್ಥೆಗಳ ನಿರ್ವಹಣೆಗೆ ಸರ್ಕಾರದಿಂದ ಅನುದಾನ ಒದಗಿಸಲಾಗುತ್ತಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು.


ಜಿಲ್ಲೆಯಲ್ಲಿರುವ ಸಾಂತ್ವನ ಕೇಂದ್ರಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಅನುದಾನ ನೀಡಲಾಗುತ್ತಿದೆ. ವಿವಿಧ ಇಲಾಖೆಯ ಸಹಯಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಸಾಂತ್ವಾನ ಕೇಂದ್ರದ ಸಮಾಲೋಚಕಿ ಲಲಿತಾ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಪೊಲೀಸ್ ವರಿ?ಧಿಕಾರಿ ಶೃತಿ, ಎಸಿಪಿ ಸದಾಶಿವ ಕಟ್ಟಿಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್ ನಾಗರಾಜ, ವಿವಿಧ ಸಾಂತ್ವಾನ ಕೇಂದ್ರದ ಸಂಯೋಜಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Related Articles

Back to top button