Kannada NewsPoliticsWorld

*ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ: ಡೊನಾಲ್ಡ್ ಟ್ರಂಪ್ ಸುಳಿವು*

ಪ್ರಗತಿವಾಹಿನಿ ಸುದ್ದಿ: ಭಾರತ ಮತ್ತು ಅಮೆರಿಕ ನಡುವಿನ ಬಹುನಿರೀಕ್ಷಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಶೀಘ್ರದಲ್ಲೇ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಎರಡೂ ದೇಶಗಳ ನಡುವೆ ಒಪ್ಪಂದಕ್ಕೆ ಸಂಬಂಧಿಸಿದಂತೆ ನಿರಂತರ ಮಾತುಕತೆಗಳು ನಡೆಯುತ್ತಿದ್ದು, ಈ ಒಪ್ಪಂದವು ಹಿಂದಿನ ಒಪ್ಪಂದಗಳಿಗಿಂತ ಭಿನ್ನವಾಗಿರಲಿದೆ ಎಂದು ಟ್ರಂಪ್ ಸುಳಿವು ನೀಡಿದ್ದಾರೆ.

ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತ ಮತ್ತು ಅಮೆರಿಕ ಒಪ್ಪಂದ ಮಾಡಿಕೊಳ್ಳಲು ಉತ್ಸುಕವಾಗಿದ್ದು, ಮಾತುಕತೆಗಳು ಬಹುತೇಕ ಅಂತಿಮ ಹಂತ ತಲುಪಿವೆ ಎಂದು ಹೇಳಿದ್ದಾರೆ. ಆದರೆ, ಒಪ್ಪಂದದ ಸಂಪೂರ್ಣ ಸ್ವರೂಪ ಹಾಗೂ ಪ್ರಮುಖ ಷರತ್ತುಗಳ ಕುರಿತು ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಇನ್ನೊಂದೆಡೆ, ಭಾರತಕ್ಕೆ ಭೇಟಿ ನೀಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಕೂಡ ವ್ಯಾಪಾರ ಒಪ್ಪಂದದ ಮಾತುಕತೆಗಳು ಅಂತಿಮ ಹಂತದಲ್ಲಿವೆ ಎಂದು ತಿಳಿಸಿದ್ದಾರೆ. ಕೆಲವೇ ಕೆಲವು ವಿಷಯಗಳ ಕುರಿತು ಒಮ್ಮತ ಮೂಡಬೇಕಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಸುಂಕ ನೀತಿ ಸೇರಿದಂತೆ ಬಾಕಿ ಉಳಿದಿರುವ ಪ್ರಮುಖ ವಿಚಾರಗಳ ಬಗ್ಗೆ ಉಭಯ ದೇಶಗಳು ಚರ್ಚೆ ನಡೆಸುತ್ತಿವೆ. ಈ ಒಪ್ಪಂದ ಅಂತಿಮಗೊಂಡರೆ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ವಹಿವಾಟು ಹಾಗೂ ಆರ್ಥಿಕ ಸಹಕಾರ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆಯಿದೆ.

Related Articles

Back to top button