![](https://pragativahini.com/wp-content/uploads/2025/02/summer.jpg)
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲ ಪ್ರಮಾಣ ಹೆಚ್ಚುತ್ತಿದ್ದು, ಉತ್ತರ ಒಳನಾಡಿನಲ್ಲಿ ಬಿಸಲ ಧಗೆ ಇನ್ನಷ್ಟು ಏರಿಕೆಯಾಗುತ್ತಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ವಿಜಯಪುರ ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ.
ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ಗರಿಷ್ಠ ಉಷ್ಣಾಂಶ 30.0 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ