Kannada NewsKarnataka NewsLatest

*ಸಾರಿಗೆ ನೌಕರರ ಪ್ರತಿಭಟನೆ ತಾತ್ಕಾಲಿಕ ವಾಪಸ್*

ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಡೆಡ್ ಲೈನ್


ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಪ್ರತಿಭಟನೆ ನಾಳೆಯಿಂದ ತೀವ್ರಸ್ವರೂಪ ಪಡೆಯುವುದರಲ್ಲಿತ್ತು. ಆದರೆ ಸರ್ಕಾರ ಹಾಗೂ ಜಂಟಿ ಕ್ರಿಯಾ ಸಮಿತಿ ನಡುವೆ ನಡೆದ ಸಭೆ ಫಲಪ್ರದವಗಿದ್ದು, ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.

Home add -Advt

ರಾಜ್ಯ ಸರ್ಕಾರಕ್ಕೆ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಲಾಗಿದೆ. 38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟಿ ಹಿಡಿದಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಕೆಎಸ್​ಆರ್​ಟಿಸಿ ಎಂಡಿ ಫ್ರೀಡಂಪಾರ್ಕ್​​ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಜತೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಸಭೆ ಮಾಡಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿದ್ದಾರೆ.

ನಾಳೆಯಿಂದ ಮುಷ್ಕರ ನಡೆಸದಿರಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಆದ್ರೆ, ಸರ್ಕಾರಕ್ಕೆ ಮಾರ್ಚ್‌ 2ರ ಗಡುವು ನೀಡಿದ್ದು, ಮಾರ್ಚ್‌ 2ರೊಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೇ ಅರಸ್ ತಿಳಿಸಿದ್ದಾರೆ.


Related Articles

Back to top button