Latest

*BJP ಶಾಸಕರು ಕಾಂಗ್ರೆಸ್ ಸೇರುವ ವಿಚಾರ; ಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ನಿರೀಕ್ಷೆಯಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಕೇಂದ್ರ ಚುನಾವಣಾ ಆಯೋಗ ಚುನಾವಣೆ ದಿನಾಂಕ ಪ್ರಕಟಿಸಲಿದೆ. ನೀತಿ ಸಂಹಿತೆ ಜಾರಿಯಾಗುವುದರಿಂದ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಕೊಪ್ಪಳ ಜಿಲ್ಲಾ ಪ್ರವಾಸವನ್ನು ರದ್ದು ಮಾಡಿದ್ದೇನೆ. ಕಳೆದ ಬಾರಿ 27ರಂದು ಚುನಾವಣೆ ಘೋಷಣೆಯಾಗಿತ್ತು. ಈ ಬಾರಿ ಎರಡು ದಿನ ತಡವಾಗಿದೆ ಎಂದರು.

ಇದೇ ವೇಳೆ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರವಾಗಿ ಮಾತನಾಡಿದ ಸಿಎಂ, ಯಾರೂ ಕೂಡ ಬಿಜೆಪಿಯನ್ನು ಬಿಡುವುದಿಲ್ಲ, ಎಲ್ಲರೂ ಬಿಜೆಪಿಯಲ್ಲಿಯೇ ಇರುತ್ತಾರೆ. ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ.ರಾಜ್ಯದಲ್ಲಿ ಬಿಜೆಪಿ ಈ ಬಾರಿ ಬಹುಮತಗಳಿಂದ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Home add -Advt

Related Articles

Back to top button