ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರದ ಮೂಲಕ ಸೂಚಿಸಿದೆ.
ಕರ್ನಾಟಕದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಬಹುದು. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆ ಸಿದ್ಧತೆ ತಯಾರಿ ನಡೆಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ತಿಳಿಸಿದೆ.
ಮಾರ್ಚ್ 27 ಅಥವಾ 28ರಂದು ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ