Latest

*ವಾಲ್ಮೀಕಿ ನಿಗಮ, ಮುಡಾ ಹಗರಣ ಆಯ್ತು, ಈಗ ಕರ್ನಾಟಕ ವಕ್ಫ್ ಬೋರ್ಡ್ ನಲ್ಲಿಯೂ ಅಕ್ರಮ ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ, ಮೂಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಗಳ ಬೆನ್ನಲ್ಲೇ ಇದೀಗ ಕರ್ನಾಟಕ ವಕ್ಫ್ ಬೋರ್ಡ್ ನಲ್ಲಿಯೂ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಅಂಶ ಬಯಲಾಗಿದೆ.

Related Articles

ರಾಜ್ಯ ವಕ್ಫ್ ಬೋರ್ಡ್ ನ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ವಕ್ಫ್ ಮಂಡಳಿ ದೂರು ದಾಖಲಿಸಿದೆ.

ವಕ್ಫ್ ಮಂಡಳಿಯ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹ್ಮದ್ ಅಬ್ಬಾಸ್ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವಕ್ಫ್ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂಪಾಯಿ ಹಣ ಮಂಡಳಿ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಈ ಹಣವನ್ನು ಮಂಡಳಿ ಸಿಇಒ ಝುಲ್ಫಿಕಾರುಲ್ಲಾ, 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್ ಸಿಇಒ ಹೆಸರಲ್ಲಿ ಎರಡು ಚೆಕ್ ಗಳ ಮೂಲಕ ವರ್ಗಾವಣೆ ಮಾಡಿದ್ದರು. ಇದರಿಂದ ವಕ್ಫ್ ಮಂಡಳಿಗೆ 8 ಕೋಟಿ ರೂ ನಷ್ಟವಾಗಿದೆ. ಝುಲ್ಫಿಕರುಲ್ಲಾ ಮಂದಳಿಯ ಗಮನಕ್ಕೆ ತರದೇ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button