Kannada NewsKarnataka NewsLatest

ಕರ್ನಾಟಕದ ಹವಾಮಾನ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಅಲ್ಲಲ್ಲಿ ಮಳೆಯಾಗಿದ್ದರಿಂದ ಇನ್ನು ಇವತ್ತು ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ಈಗಿನಂತೆ ಡಿಸೆಂಬರ್ 9ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಮುಂಜಾನೆ ಅಲ್ಲಲ್ಲಿ ಮಳೆಯಾಗಿದ್ದರಿಂದ ಇವತ್ತು ಇನ್ನು ಸಾಧ್ಯತೆ ಕಡಿಮೆ ಇರಬಹುದು. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ರಾಯಚೂರು ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು. 

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಈಗಿನಂತೆ ಡಿಸೆಂಬರ್ 7ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಫೆಂಗಲ್ ಚಂಡಮಾರುತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸಿರುವುದರಿಂದ ಅದರ ನೇರ ಪ್ರಭಾವ ಕಡಿಮೆಯಾದರೂ ಬಂಗಾಳಕೊಲ್ಲಿಯ ಕಡೆಯಿಂದ ಮಾರುತಗಳನ್ನು ಸೆಳೆಯುವುದರಿಂದ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಡಿಸೆಂಬರ್ 7ರ ಸುಮಾರಿಗೆ ನಿಕೋಬಾರ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪರಿಸ್ಥಿತಿ ಮತ್ತು ಪರಿಣಾಮ ಕಾದು ನೋಡಬೇಕಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button