Kannada NewsKarnataka NewsLatest

*ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ*: *ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ವಾತಾವರಣ ಮತ್ತೆ ಮುಂದುವರಿಯುವ ಸೂಚನೆ ಸಿಕ್ಕಿದೆ. ಮಂಗಳವಾರ ಬೆಂಗಳೂರಿನ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು ಮತ್ತು ಮಿಂಚಿನ ಆರ್ಭಟವೂ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂದಿನ ಎರಡು ದಿನಗಳ ಹವಾಮಾನ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯೂ ಸಂಭವಿಸಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ನವೆಂಬರ್ 26ರಂದು ಯಾವ ಜಿಲ್ಲೆಗಳಲ್ಲಿ ಮಳೆ?

ನವೆಂಬರ್ 26ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಟ್ಟಿನಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿಯ ಕೆಲವು ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ.

Related Articles

Back to top button