Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣಾರ್ಭಟ ಇಂದೂ ಕೂಡ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ.

Home add -Advt

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕೇವಲ ಗಾಳಿ ಮಾತ್ರ ಬೀಸಲಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಅಥವಾ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸಲಿದೆ.

ಕಲಬುರಗಿ, ಬೀದರ್, ಬಾಗಲಕೋಟೆ ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣವಾಗಿದ್ದರೂ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಬಲವಾದ ಗಾಳಿ ಬೀಸಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿಗಾಳಿ ಬೀಸುವ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಲಘುವಾಗಿ ಮಳೆಯಾಗುವ ಸಾಅಧ್ಯತೆ ಇದೆ. ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಸುಳಿವಿಲ್ಲ. ಇಂದು ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button