Latest

*ಭಾರಿ ಚಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವಿಪರೀತ ಚಳಿ ವಾತಾವರಣ ಮುಂದುವರೆದಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜಿನ ಜತೆ ಮೋಡಕವಿದ ವಾತಾವರಣವಿದೆ. ವೀಕೆಂಡ್ ಇದ್ದರೂ ಬೆಂಗಳೂರಿನ ಜನರು ಮನೆಯಿಂದ ಹೊರಬರಲಾಗದಷ್ಟು ಚಳಿ ಸಿಲಿಕಾನ್ ಸಿಟಿಯನ್ನು ಕವಿದಿದೆ.

ಇನ್ನೂ ಒಂದು ವಾರಗಳ ಕಾಲ ರಾಜ್ಯಾದ್ಯಂತ ದಟ್ಟ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ತಾಪಮಾನ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ.

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಚಳಿ, ಮೋಡಕವಿದ ವಾತಾವರಣವಿದೆ. ಬೆಂಗಳೂರಿನಲ್ಲಿ ಕಳೆದ ನಾಲ್ಕುದಿನಗಳಿಂದ ದಟ್ಟ ಮಂಜು ಆವರಿಸಿದ್ದು, ಶೀತ ಗಾಳಿಯಿಂದಾಗಿ ಜ್ವರ, ಕೆಮ್ಮು ನೆಗಡಿ, ಎದೆನೋವು, ಉಸಿರಾಟದ ಸಮಸ್ಯೆ, ಅಸ್ತಮಾದಂತಹ ಸಮಸ್ಯೆಗಳಿಂದಾಗಿ ಜನರು ಬಳಲುತ್ತಿದ್ದಾರೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈ ವಾರವಿಡಿ ಬಹುತೇಕ ಚಳಿ ಹೆಚ್ಚಳವಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ಶೀತಗಾಳಿ ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
*ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ PSI ಪ್ರಕರಣದ ಆರೋಪಿ ರುದ್ರೇಗೌಡ ಪಾಟೀಲ್*

https://pragati.taskdun.com/545-psi-scamaccused-rudregowda-patilelectioncontesannounce/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button